ಮಂಗಳೂರು ವಿ. ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿ
ಮಂಗಳೂರು ವಿ. ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿ
ಬಸ್ರೂರು ಶ್ರೀ ಶಾರದಾ ಕಾಲೇಜಿನ ಆಶ್ರಯದಲ್ಲಿ ಡಿ. 12ಮತ್ತು 13ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಪ್ರಥಮ ಪ್ರಶಸ್ತಿಯನ್ನು ಪಡೆಯಿತು. ಮಂಗಳೂರಿನ ಎಸ್.ಜಿ.ಸಿ. ದ್ವಿತೀಯ, ಮಂಗಳೂರಿನ ರೋಜಾರಿಯೋ ಕಾಲೇಜು ತೃತೀಯ ಪ್ರಶಸ್ತಿಯನ್ನು ಪಡೆದವು.
ಮಂಗಳೂರು ವಿ. ವಿ ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿ | SSC Basrur |
ಮಹಿಳಾ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಪ್ರಥಮ, ಆಳ್ವಾಸ್ ದೈಹಿಕ ಶಿಕ್ಷಣ ತರಬೇತಿ ಸಂಸ್ಥೆ ದ್ವಿತೀಯ ಮತ್ತು ಮಂಗಳೂರಿನ ಎಸ್.ಜಿ.ಸಿ. ತೃತೀಯ ಪ್ರಶಸ್ತಿಯನ್ನು ಪಡೆದವು.
ಮಂಗಳೂರು ವಿ. ವಿ. ವ್ಯಾಪ್ತಿಯ ವಿವಿಧ ಕಾಲೇಜುಗಳನ್ನು ಪ್ರತಿನಿಧಿಸುವ ನೂರಕ್ಕೂ ಹೆಚ್ಚು ಪುರುಷ ಮತ್ತು ಮಹಿಳಾ ಕುಸ್ತಿಪಟುಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಎಂ. ಚಂದ್ರಪ್ರಭಾ ಆರ್. ಹೆಗ್ಡೆ ಅವರು ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರುವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಕಲ್ಪನಾ ಭಾಸ್ಕರ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಆಚಾರ್, ಬಸ್ರೂರು ಗ್ರಾ. ಪಂ. ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲ ಕೆ. ರಾಧಾಕೃಷ್ಣ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕುಸ್ತಿ ತರಬೇತುದಾರ ನವೀದ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಕ್ರೀಡಾ ವೇದಿಕೆಯ ಸಂಚಾಲಕ ಪುರುಷೋತ್ತಮ ಬಲ್ಯಾಯ ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕಿ ಡಾ| ಚಂದ್ರಾವತಿ ಶೆಟ್ಟಿ ವಂದಿಸಿದರು. ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಮತ್ತು ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.